ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ನವೆಂಬರ್ 12 ಮತ್ತು 14 ರಂದು ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ಕೆಳಕಂಡ ಸ್ಥಳಗಳಿಗೆ 2 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ನಿಗಮ ಮಾಡಿದೆ. ಇದರ ಜೊತೆಗೆ ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.14 ಹಾಗೂ 15 ರಂದು ವಿಶೇಷ ಬಸ್ಸುಗಳು ಕೂಡ ಸಂಚರಿಸಲಿವೆ ಎಂದು KSRTC ತಿಳಿಸಿದೆ.
ಇದನ್ನೂ ಓದಿ: PSI ನೇಮಕ ಅಕ್ರಮ: ಇಂದು ಹೈಕೋರ್ಟ್ ತೀರ್ಪು
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಬಸ್ಗಳು ಕಾರ್ಯನಿರ್ವಹಿಸಲಿವೆ.