Tuesday, November 5, 2024

ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ : ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ. ಶಂಕರ್ ನಾಗ್ ರವರ 69ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. 

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ವೇಳೆ ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಅರಸಾಳಿನ ಮಾಲ್ಗುಡಿ ಡೇಸ್​ಗೂ ಶಂಕರಣ್ಣನಿಗೂ ಅವಿನಭಾವ ಸಂಬಂಧ. ಅಂದು ಭಾರತದಲ್ಲಿ ಇದ್ದ ಏಕೈಕ ಟೆಲಿವಿಷನ್ ದೂರದರ್ಶನ ಮಾತ್ರ. ಅಂತೂ ದೂರದರ್ಶನ ಕೊಟ್ಟ ಆಫರ್ ಅನ್ನು ಸ್ವೀಕರಿಸಿದ್ದ ಶಂಕರ್ ನಾಗ್ ಮಾಲ್ಗುಡಿ ಡೇಸ್ ಎಂಬ ಅತ್ಯದ್ಭುತ ಟಿವಿ ಧಾರಾವಾಹಿಯನ್ನು ನಿರ್ದೇಶಿಸಿದ್ದರು. ಮಾಲ್ಗುಡಿ ಡೇಸ್ ಚಿತ್ರೀಕರಣ ನಡೆದಿದ್ದು ಶಿವಮೊಗ್ಗ ಜಿಲ್ಲೆಯ ಅರಸಾಳು, ಆಗುಂಬೆ ಹಾಗೂ ಇನ್ನಿತರರ ಪ್ರದೇಶಗಳಲ್ಲಿ. ಈ ಧಾರಾವಾಹಿ ಭಾರತೀಯ ಟೆಲಿವಿಷನ್ ನಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದು ಶಂಕರ್ ನಾಗ್ ಅವರ ಪ್ರತಿಭೆಗೆ ಸಂದ ಗೌರವವಾಗಿದೆ.

ಈ ಸುದ್ದಿ ಓದಿದ್ದೀರಾ? : ಶಂಕರ್‌ನಾಗ್ ಗೆ 69ನೇ ಜನ್ಮದಿನದ ಸಂಭ್ರಮ!

ಶಂಕರ್‌ ನಾಗ್ ಅವರು 1954ರ ನವೆಂಬರ್ 9 ರಂದು ಹೊನ್ನಾವರದ ನಾಗರಕಟ್ಟೆಯಲ್ಲಿ ಜನಿಸಿದ್ದರು. ನಟ, ನಿರ್ದೇಶಕ, ಬರಹಗಾರ, ನಿರ್ಮಾಪಕ ಹೀಗೆ ಬಹಳಷ್ಟು ದಾರಿಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

RELATED ARTICLES

Related Articles

TRENDING ARTICLES