ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಲಿದ್ದಾರೆ.
ಪಂಚ ರಾಜ್ಯ ವಿಧಾನಸಭೆ ಚುನಾವಣಾ (Assembly election 2023) ಪ್ರಚಾರ ಕಣಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ʼಗ್ಯಾರಂಟಿ ಸಿಎಂ ಸಿದ್ದರಾಮಯ್ಯʼ ಅವರ ಚುನಾವಣಾ ಪ್ರಚಾರ (Telangana assembly election) ಆರಂಭವಾಗಲಿದೆ.
ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ತೆಲಂಗಾಣದಲ್ಲಿ ಕಾಂಗ್ರೆಸ್ (congress) ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ತೆಲಂಗಾಣದ ನಂತರ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಪ್ರಚಾರಕ್ಕೆ ಸಿದ್ದರಾಮಯ್ಯ ತೆರಳಲಿದ್ದಾರೆ.
ಇದನ್ನೂ ಓದಿ: KEA ಪರೀಕ್ಷೆ ಅಕ್ರಮ : ಆರ್ಡಿ ಪಾಟೀಲ್ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಈ ತಿಂಗಳಲ್ಲಿ ಸಾಧ್ಯವಾದಷ್ಟು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಅದರಲ್ಲೂ ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಒಬಿಸಿ ಮತಗಳು ಹೆಚ್ಚು ಇರುವುದರಿಂದ ಸಿಎಂಗೆ ಪ್ರಚಾರಕ್ಕೆ ಆಹ್ವಾನ ನೀಡಲಾಗಿದೆ. ಈಗಾಗಲೇ ಮಿಜೋರಾಂನಲ್ಲಿ ಮತದಾನ ಮುಗಿದಿದ್ದು, ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ಪ್ರಚಾರ ನಡೆಯುತ್ತಿದೆ.