Wednesday, January 22, 2025

PSI ಮರುಪರೀಕ್ಷೆ : ಬಿಜೆಪಿ ಸಚಿವರಿಗೆ ಹೈಕೋರ್ಟ್ ಛೀಮಾರಿಗೆ ಹಾಕಿದಂತೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : PSI ನೇಮಕಾತಿ ಮರು ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕ ಹೈಕೋರ್ಟ್​ PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಹಿಂದೆ ನಡೆದಿರುವ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಉಚ್ಚ ನ್ಯಾಯಾಲಯದ ಸಾಕ್ಷಿ ಮುದ್ರೆಯಾಗಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದೇ ಇಲ್ಲ ಎಂದು ಬಿಜೆಪಿ ಹಲವಾರು ಬಾರಿ ಸದನಕ್ಕೆ ವಾದಿಸಿತ್ತು. ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದ ಅಂದಿನ ಬಿಜೆಪಿ ಸಚಿವರಿಗೆ ಛೀಮಾರಿಗೆ ಹಾಕಿದಂತೆ ಎಂದು ಕುಟುಕಿದ್ದಾರೆ.

ಪಿಎಸ್ಐ ಆಕಾಂಕ್ಷಿಗಳ ಗೆಲುವು

ಆಗಿರುವ ಅಕ್ರಮದ ಸಂಪೂರ್ಣ ಚಿತ್ರಣವನ್ನು ನ್ಯಾಯಲಯಕ್ಕೆ ಸಮರ್ಥವಾಗಿ ಮನವರಿಕೆ ಮಾಡಿಸಿ 56,000ಕ್ಕೂ ಹೆಚ್ಚು ಆಕಾಂಕ್ಷಿಗಳ ಪರವಾಗಿ ತೀರ್ಪು ಬರುವಂತೆ ಮಾಡಿರುವ ನಮ್ಮ ಸರ್ಕಾರದ ವಕೀಲರ ತಂಡಕ್ಕೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಈ ಗೆಲುವು ಬಿಜೆಪಿಯ ಭ್ರಷ್ಟ ಆಡಳಿತದ ವಿರುದ್ಧ ಸಿಡಿದೆದ್ದು ಸಂಘಟಿರಾಗಿ, ಪ್ರಕರಣವನ್ನು ಮುನ್ನಲೆಗೆ ತರಲು ಹೋರಾಡಿದ ಎಲ್ಲಾ ನ್ಯಾಯಯುತ ಪಿಎಸ್ಐ ಉದ್ಯೋಗ ಆಕಾಂಕ್ಷಿಗಳ ಗೆಲುವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

RELATED ARTICLES

Related Articles

TRENDING ARTICLES