Saturday, May 4, 2024

ಯರಗೊಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!

ಬಂಗಾರಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಉದ್ಘಾಟನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2197.72 ಕೋಟಿ ರೂ.ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಇದನ್ನೂ ಓದಿ: ಬಿ ವೈ ವಿಜಯೇಂದ್ರ ಗೆ ರಾಜ್ಯಾಧ್ಯಕ್ಷ ಪಟ್ಟ: ನಿಜವಾಯ್ತು ಶಿವಾಚಾರ್ಯ ಸ್ವಾಮಿಗಳ ಕಾಲಜ್ಞಾನ!

ಈ ವೇಳೆ ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಾಸಕರು ಹಾಗೂ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕರಾದ ಕೆ.ವೈ.ನಂಜೇಗೌಡ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸಂಸದ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES