Monday, May 6, 2024

ಪಾಕಿಸ್ತಾನಕ್ಕೆ 338 ರನ್​ಗಳ ಬಿಗ್ ಟಾರ್ಗೆಟ್ : ಪಾಕ್ ಖೇಲ್ ಖತಂ?

ಬೆಂಗಳೂರು : ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 337 ರನ್​ಗಳ ಬೃಹತ್ ಮೊತ್ತ ದಾಖಲಿಸಿದೆ. ಸೆಮಿಸ್‌ಗೆ ಅರ್ಹತೆ ಪಡೆಯಲು ಪಾಕಿಸ್ತಾನ ಈ ಗುರಿಯನ್ನು 6.4 ಓವರ್‌ಗಳಲ್ಲಿ ಬೆನ್ನಟ್ಟಬೇಕಾಗಿದೆ. ಇಲ್ಲವಾದರೆ ಪಾಕ್ ಸೆಮಿಸ್ ಕನಸು ಭಗ್ನವಾಗಲಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್​ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 337 ರನ್​ ಕಲೆಹಾಕಿತು.

ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ 84, ಜೋ ರೂಟ್ 60, ಜಾನಿ ಬೈರ್‌ಸ್ಟೋವ್ 59, ಡೇವಿಡ್ ಮಲಾನ್ 31, ಹ್ಯಾರಿ ಬ್ರೂಕ್ 30, ನಾಯಕ ಜೋಸ್ ಬಟ್ಲರ್ 27 ರನ್ ಗಳಿಸಿದರು. ಪಾಕಿಸ್ತಾನ ಪರ ಹ್ಯಾರಿಸ್ ರೌಫ್ 3, ಶಾಹೀನ್ ಅಫ್ರಿದಿ ಹಾಗೂ ಮೊಹಮ್ಮದ್ ವಾಸಿಂ ಜೂನಿಯರ್ ತಲಾ 2, ಇಫ್ತಿಕರ್ ಅಹ್ಮದ್ ಒಂದು ವಿಕೆಟ್ ಪಡೆದರು.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್

ಪಾಕಿಸ್ತಾನ ತಂಡ

ಬಾಬರ್ ಆಝಂ (ನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಮೊಹಮ್ಮದ್ ರಿಝ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್

RELATED ARTICLES

Related Articles

TRENDING ARTICLES