Sunday, May 5, 2024

ಸರ್ಕಾರ ರೈತರ ಬೆನ್ನೆಲುಬಾಗಿ ನಿಂತಿದೆ: ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಜಿಲ್ಲೆಯ 5 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಅವಲೋಕಿಸಿ, ಇದೇ ತಿಂಗಳ ನ.15 ರೊಳಗಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಚಿವ ಬಿ ನಾಗೇಂದ್ರ ತಿಳಿಸಿದ್ದಾರೆ.

ಈ ಬಾರಿಯ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಯಾರೂ ಆತಂಕ ಪಡಬಾರದು. ಸರ್ಕಾರ ಮತ್ತು ಜಿಲ್ಲಾಡಳಿತ ನಿಮ್ಮ ಜತೆಗಿದೆ ಎಂದು ಸಚಿವ ಬಿ ನಾಗೇಂದ್ರ ಅವರು ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: ಯರಗೊಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!

ಇಂದು ಜಿಲ್ಲೆಯ ಸಿರುಗುಪ್ಪ-ಕುರುಗೋಡು ತಾಲೂಕುಗಳ ವ್ಯಾಪ್ತಿಯ ವಿವಿಧ ಗ್ರಾಮಗಳಾದ ರಾರಾವಿ, ಅಗಸನೂರು, ಬೊಮ್ಮಲಾಪುರ, ಕೊತ್ತಲಚಿಂತೆ, ಮಿಟ್ಟೆ ಸುಗೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಬರ ಪರಿಸ್ಥಿತಿ ವೀಕ್ಷಣೆ ಮಾಡಿ, ರೈತರಿಗೆ ಸಾಂತ್ವನ ಹೇಳಿದರು. ರಾರಾವಿ ಗ್ರಾಮದ ರೈತ ಮಂಜಪ್ಪನ ಹತ್ತಿ ಹೊಲ, ಕೊರವರ ಮಾರೆಪ್ಪನ ಮೆಣಸಿನಕಾಯಿ ಹೊಲಕ್ಕೆ ಭೇಟಿ ನೀಡಿ, ಬೆಳೆ ಪರೀಕ್ಷಿಸಿದರು.

ಅದೇ ರೀತಿಯಾಗಿ ಅಗಸನೂರು ಗ್ರಾಮದ ರೈತ ಹುಸೇನಪ್ಪನ ಮೆಣಸಿನಕಾಯಿ ಬೆಳೆ, ಮಿಟ್ಟೆ ಸುಗೂರಿನ ಹನುಮಂತ, ಬೊಮ್ಮಲಾಪುರ ಗ್ರಾಮದ ಮಣಿಯಪ್ಪ ರೈತರ ಮೆಣಸಿನಕಾಯಿ ಬೆಳೆಗಳ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರು ಯಾರೂ ಧೃತಿಗೆಡಬಾರದು, ಸಮೀಕ್ಷೆ ಅನುಸಾರ ಬರ ಪರಿಹಾರ ಒದಗಿಸಲು ರಾಜ್ಯ ಸರ್ಕಾರವು ರೈತರ ಬೆನ್ನೆಲುಬಾಗಿ ನಿಂತಿದೆ. ಯಾರೂ ಆತಂಕ ಪಡಬಾರದು ಎಂದು ಸಚಿವ ಬಿ.ನಾಗೇಂದ್ರ ಅವರು ರೈತರಿಗೆ ಮನವರಿಕೆ ಮಾಡಿದರು.

RELATED ARTICLES

Related Articles

TRENDING ARTICLES