Tuesday, May 21, 2024

ರಶ್ಮಿಕಾ ಡೀಪ್‌ಫೇಕ್‌ ವೀಡಿಯೋ ಕೇಸ್‌ : ಎಫ್‌ಐಆರ್‌ ದಾಖಲು

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ FIR ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ FIR ದಾಖಲಿಸಲಾಗಿದೆ.

ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES