Sunday, May 19, 2024

ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಮೂವರ ಬಂಧನ

ಕಡೂರು: ವಸತಿ ಶಾಲೆಗೆ ಮಕ್ಕಳನ್ನು ಕಳಿಸಿ ಓದಿಸುವ ಪೋಷಕರು ಅತಿ ಹೆಚ್ಚು ಗಮನಹರಿಸಿ ಎಚ್ಚರ ವಹಿಸಬೇಕಿದೆ. ಶಿಕ್ಷಣ ಇಲಾಖೆ ತಲೆತಗ್ಗಿಸುವಂಥ ಘೋರ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ.

ಹೌದು, ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಕೆಲಸದ ಪರೀಕ್ಷೆ ಬರೆಯಲು ಅವಕಾಶ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಯರಿಗೆ ಮತ್ತು ಅಮಲು ಬರೆಸುವ ಔಷಧ ನೀಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಕಡೂರು ತಾಲೂಕಿನ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶುಶ್ರೂಷಕಿ ಚಂದನ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನರ್ಸ್ ಪ್ರಿಯಕರ ವಿನಯ್ ಎಂಬವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

ಘಟನೆಯ ವಿವರ

ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ. ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಅಲ್ಲೇ ಉಳಿಸಿಕೊಳ್ಳುತ್ತಿದ್ದಳು.

ಕಾಫಿ-ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳ ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ  ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನು ಬಳಸಿಕೊಂಡಿರುವ ಅನುಮಾನವಿದೆ. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.

 

 

RELATED ARTICLES

Related Articles

TRENDING ARTICLES