Monday, May 20, 2024

ವಿಜಯೇಂದ್ರ ನೇಮಕದ ನಿರೀಕ್ಷೆಯಿರಲಿಲ್ಲ : ಹೈಕಮಾಂಡ್ ಮುಂದೆ ಯಾವುದೇ ಡಿಮ್ಯಾಂಡ್ ಇಟ್ಟಿರಲಿಲ್ಲ : ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ನಾನು ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಶಗುತ್ತೇನೆ ಎಂದು ಯಾವುದೇ ನಿರೀಕ್ಷೆಯಿರಲಿಲ್ಲ ಹೈಕಮಾಂಡ್ ಮುಂದೆ ಯಾವುದೇ ಡಿಮ್ಯಾಂಡ್ ಇಟ್ಟಿರಲಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ನೀವು ಯಾರನ್ನು ಬೇಕಾದರೂ ಕೇಳಿ ನೋಡಿ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ನಾನು ಒಂದು ದಿನವೂ ದೆಹಲಿಗೆ ಹೋಗಿ ಕೇಳಿರಲಿಲ್ಲ, ಹೈಕಮಾಂಡ್ ಮುಂದೆ ಮನವಿ ಮಾಡಿರಲಿಲ್ಲ. ಹಲವು ವಿಚಾರಗಳನ್ನು ಅಳೆದು ತೂಗಿ ಸೂಕ್ತ ಸಮಯದಲ್ಲಿ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನ.15 ರಂದು ವಿಜಯೇಂದ್ರ ಪದಗ್ರಹಣ ಸಾಧ್ಯತೆ

ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆಗಿದೆ, ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಸಮಾಜದ ಬೆಂಬಲ ಇನ್ನೂ ಹೆಚ್ಚು ಸಿಗಲಿದೆ. ಮುಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿ ಅವರಿಗೆ ಒಳ್ಳೆಯ ಉಡುಗೊರೆ ಕೊಡಬೇಕೆಂಬುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

 

RELATED ARTICLES

Related Articles

TRENDING ARTICLES