Monday, December 23, 2024

ನಟ ನಾಗಭೂಷಣ್​​​ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಪುಷ್ಪ’ ಶೈಲಿಯಲ್ಲಿ ಮರಗಳ್ಳತನಕ್ಕೆ ಯತ್ನ; ಆರೋಪಿ ಅರೆಸ್ಟ್​​!

ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

RELATED ARTICLES

Related Articles

TRENDING ARTICLES