Saturday, May 18, 2024

ಭಾರತ & ನೆದರ್ಲೆಂಡ್​ ನಡುವೆ ಹಣಾಹಣಿ: ಟಾಸ್​ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ v/s ನೆದರ್ಲೆಂಡ್​ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು ಟಾಸ್​​ ಗೆದ್ದು ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.

ಅಂಕಪಟ್ಟಿಯಲ್ಲಿ ಭಾರತ ಈಗಾಗಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ನೆದರ್ಲೆಂಡ್ ವಿರುದ್ಧದ ಪಂದ್ಯದ ಸೋಲು-ಗೆಲುವು ಭಾರತದ ಪಾಯಿಂಟ್ಸ್ ಪಟ್ಟಿಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಟೀಂ ಇಂಡಿಯಾ ಆಡುತ್ತಿರುವ ರೀತಿಯನ್ನು ನೋಡಿದರೆ, ನೆದರ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಒಂಬತ್ತನೇ ಸತತ ಗೆಲುವು ದಾಖಲಿಸುವ ಮೂಲಕ ಅಭಿಮಾನಿಗಳಿಗೆ ದೀಪಾವಳಿಯ ಉಡುಗೊರೆ ನೀಡಲು ಪ್ರಯತ್ನಿಸಲಿದೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಂದ ಕಿರಾತಕ!

ವಾಸ್ತವವಾಗಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು 12 ವರ್ಷಗಳ ನಂತರ ಏಕದಿನ ವಿಶ್ವಕಪ್​ನಲ್ಲಿ ಮುಖಾಮುಖಿಯಾಗುತ್ತಿವೆ. 2011ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ಕೊನೆಯ ಬಾರಿ ಮುಖಾಮುಖಿಯಾಗಿದ್ದವು.

RELATED ARTICLES

Related Articles

TRENDING ARTICLES