Wednesday, January 22, 2025

ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ!

ಮೈಸೂರು: ಆಹಾರ ಅರಸಿ ಬಂದ ಚಿರತೆ ತಂತಿ ಬೇಲಿಗೆ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಘಟನೆ ಮೈಸೂರಿನ ಹೆಚ್‌.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.

ಆರ್ಮುಗಂ ಎಂಬುವರ ತೋಟದ ತಂತಿ ಬೇಲಿಗೆ ಚಿರತೆ ಸಿಲುಕಿ ನಿತ್ರಾಣಗೊಂಡಿತ್ತು, ಇದನ್ನ ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್​ ಸೆಮಿಫೈನಲ್ ಪಂದ್ಯಗಳನ್ನ ಪ್ರಕಟಿಸಿದ ಐಸಿಸಿ!

ನಿತ್ರಾಣಗೊಂಡ ಚಿರತೆಗೆ ಮೊದಲು ಚಿಕಿತ್ಸೆ ನೀಡುತ್ತಿದ್ದು, ಚಿರತೆ ಚೇತರಿಸಿಕೊಂಡ ಬಳಿಕ ಅರಣ್ಯಕ್ಕೆ ಬಿಡಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES