Tuesday, May 14, 2024

ಪಟಾಕಿಯಿಂದ ಬೆಂಗಳೂರಲ್ಲಿ ವಾಯು ಮಾಲಿನ್ಯ!

ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆ ವೇಳೆ ಪಟಾಕಿ ಸಿಡಿಸುತ್ತಿರುವುದರಿಂದ ಬೆಂಗಳೂರಲ್ಲಿ ವಾಯುಮಾಲಿನ್ಯ ಪ್ರಮಾಣ ದಿಢೀರ್ ಹೆಚ್ಚಳವಾಗಿದೆ.

ವಾಯುಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪಟಾಕಿ ಕಡ್ಡಾಯ ಇದ್ದರೂ ಸಹ ಹಲವಡೆ ರಾಸಾಯನಿಕಯುಕ್ತ ಪಟಾಕಿ ಬಳಕೆಯಾಗುತ್ತಿದೆ. ಇದರಿಂದ ನಗರದ ಹಲವಾರು ಭಾಗಗಳಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟದಲ್ಲಿದೆ.

ಇದನ್ನೂ ಓದಿ: ಅಗ್ನಿ ದುರಂತ: 6 ಕಾರ್ಮಿಕರು ಸಜೀವದಹನ!

ಈಗಾಗಲೇ ದೆಹಲಿಯಲ್ಲಿ ಮಾಲಿನ್ಯ ಏರಿಕೆಯಿಂದ ಹಲವಾರು ಸಮಸ್ಯೆಗಳು ಎದುರಾಗುತ್ತಿದೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಮಾಲಿನ್ಯದ ವಿಚಾರವಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಬೆಂಗಳೂರಿನ ನಾನಾ ಭಾಗದಲ್ಲಿ ವಾಯುಮಾಲಿನ್ಯ, ಶಬ್ದ ಮಾಲಿನ್ಯ ಅಳೆಯಲು ಮಾಪನ ಆಳವಡಿಕೆ ಮಾಡಲಾಗಿದೆ. ಈ ವೇಳೆ ಹಲವಾರು ಭಾಗಗಳಲ್ಲಿ ನಗರದ ವಾತಾವರಣ ಡೇಂಜರ್ ಝೋನ್‍ನಲ್ಲಿ ಇರುವುದು ಬೆಳಕಿಗೆ ಬಂದಿದೆ.

RELATED ARTICLES

Related Articles

TRENDING ARTICLES