Thursday, December 19, 2024

ಬೊಮ್ಮಾಯಿ ‘ನಿನ್ನ ನೇಮಕದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ’ ಅಂದ್ರು : ಬಿ.ವೈ. ವಿಜಯೇಂದ್ರ

ಬೆಂಗಳೂರು : ನಿನ್ನ ನೇಮಕದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ನಾನಷ್ಟೇ ಅಲ್ಲ, ಎಲ್ಲ ಹಿರಿಯರು ನಿನ್ನ ಜೊತೆ ಇರ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೀಪಾವಳಿಯ ಶುಭ ಸಂದರ್ಭದಲ್ಲಿ ಹಿರಿಯರಾದ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದಿದ್ದೇನೆ ಎಂದು ತಿಳಿಸಿದರು.

ನನ್ನ ನೇಮಕದಿಂದ ಅವರು ಬಹಳ ಸಂತೋಷ ಪಟ್ಟಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಿದೆ. ರಾಜ್ಯಾದ್ಯಂತ ನಿನ್ನ ನೇತೃತ್ವದಲ್ಲಿ ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ಬುಧುವಾರ ಅಧಿಕಾರ ಸ್ವೀಕಾರ ಮಾಡೋವಾಗ ಬರೋದಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಪಕ್ಷದ ಬೇರುಗಳು ಮತ್ತಷ್ಟು ಸಧೃಡಗೊಳ್ಳಲಿ

ಈ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ, ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿ, ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು. ಅವರ ಸಂಘಟನಾತ್ಮಕ ಅವಧಿಯಲ್ಲಿ ಪಕ್ಷದ ಬೇರುಗಳು ಮತ್ತಷ್ಟು ಸಧೃಡಗೊಳ್ಳಲಿ ಎಂದು ಶುಭ ಹಾರೈಸಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES