Saturday, December 28, 2024

ರಾಜ್ಯಾಧ್ಯಕ್ಷನ ಹುದ್ದೆ ದಲಿತರಿಗೆ ನೀಡಬೇಕಿತ್ತು : ಸಂಸದ ರಮೇಶ ಜಿಗಜಿಣಗಿ

ಬೆಂಗಳೂರು: ದಲಿತರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ನೀಡಬೇಕಿತ್ತು. ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡದೊಡ್ಡ ಗೌಡರು, ಸಾಹುಕಾರುಗಳು ಬಂದರು. ಅವರಿಗೆ, ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ ಎಂದಿದ್ದಾರೆ.

ವಿಜಯೇಂದ್ರ ಅಧ್ಯಕ್ಷರಾಗಿರುವುದಕ್ಕೆ ನಮಗೇನೂ ಹೊಟ್ಟೆ ಉರಿ ಇಲ್ಲ

ವಿಜಯೇಂದ್ರರವರ ನೇಮಕ ನಾವಂತೂ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚನೆ ಮಾಡಿ, ಯಡಿಯೂರಪ್ಪ ಮಗನೇ ಆಗಬೇಕು ಅಂತಾ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ : ಸಚಿವ ಕೆ.ಎನ್.ರಾಜಣ್ಣ

ಅದರ ಪ್ರಕಾರ ವಿಜಯೇಂದ್ರ ಅಧ್ಯಕ್ಷ ಆಗಿದ್ದಾನೆ. ಅವರು ಆಗಿರೋದ್ರಿಂದ ನಮಗೇನೂ ಹೊಟ್ಟೆ ಉರಿ ಏನೂ ಇಲ್ಲ ಎಂದು ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES