Monday, December 23, 2024

ದೀಪಾವಳಿ ಪಟಾಕಿ ಅವಘಡ: ಒಂದೇ ದಿನ 22 ಜನ ಆಸ್ಪತ್ರೆಗೆ​ ದಾಖಲು!

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಪಟಾಕಿ ಅವಘಡಗಳು ಸಂಭವಿಸಿದ್ದು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.

ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ಪೈಕಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಪೆಟ್ಟು ಬಿದ್ದ ಕಾರಣ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ವಂಚಕಿ ಚೈತ್ರಾ ಮೇಲೆ ಖೈದಿಗಳಿಂದ ಹಲ್ಲೆ!

ಇನ್ನೂ, ನಾರಾಯಣ ನೇತ್ರಾಲಯದಲ್ಲಿ ಒಂದೇ ದಿನಕ್ಕೆ 22 ಪ್ರಕರಣ ಪೈಕಿ 10 ಮಂದಿ ಕಣ್ಣಿಗೆ ಗಾಯವಾಗಿದ್ದು 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆಮ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇವರಲ್ಲಿ ಇಬ್ಬರಿಗೆ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯ ಮೂಲಗಳು ಮಾಹಿತಿ ನೀಡಿದ್ದು, ಕಣ್ಣಿ ಚಿಕಿತ್ಸೆಗೆ ಬೇಕಾದ ಔಷಧ ಮತ್ತು ಶಸ್ತ್ರಚಿಕಿತ್ಸೆ ನಡೆಯುತ್ತಿದೆ.

RELATED ARTICLES

Related Articles

TRENDING ARTICLES