Friday, December 27, 2024

ಮಹಿಳೆಯರಿಗೆ ಸಿಹಿಸುದ್ದಿ: ಶಕ್ತಿ ಯೋಜನೆಯ ಪ್ರಯಾಣ ಮತ್ತಷ್ಟು ಸುಲಭ!

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್‌ ಕಾರ್ಡ್‌ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯಾಧ್ಯಕ್ಷನ ಹುದ್ದೆ ದಲಿತರಿಗೆ ನೀಡಬೇಕಿತ್ತು : ಸಂಸದ ರಮೇಶ ಜಿಗಜಿಣಗಿ

ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾದಾಗಲೂ ಮೊಬೈಲ್‌ನಲ್ಲಿನ ಗುರುತಿನ ಚೀಟಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳೆಯರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.

RELATED ARTICLES

Related Articles

TRENDING ARTICLES