Wednesday, January 22, 2025

450 ರೂ.ಗೆ LPG ಸಿಲಿಂಡರ್ ಘೋಷಣೆ!

ಮಧ್ಯಪ್ರದೇಶ್: ಪಂಚರಾಜ್ಯ ಚುನಾವಣಾ ಕಣ ಕಾವೇರಿದೆ. ಮಧ್ಯಪ್ರದೇಶದಲ್ಲಿ ಹೇಗಾದರೂ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಕಸರತ್ತು ಮಾಡುತ್ತಿದೆ. ಇದರ ಮುಂದುವರಿದ ಭಾಗವಾಗಿ ಬಿಜೆಪಿ ಮಹತ್ವದ ಘೋಷಣೆ ಮಾಡಿದೆ.

ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ₹450ಗೆ ಅಡುಗೆ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಇಂದೋರ್‌ನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಈ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಗಳ ದಾಳಿಗೆ ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷ ಸಾವು!

ಮಧ್ಯಪ್ರದೇಶ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂಪಾಯಿಗೆ ಸಿಲಿಂಡರ್ ಅನ್ನು ನೀಡಲು ಉದ್ದೇಶಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ ಮಾಡಿದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES