Monday, December 23, 2024

ಇಂದು ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯ

ಮುಂಬೈ ಏಕದಿನ ವಿಶ್ವಕಪ್‌ನಲ್ಲಿ ಇಂದಿನಿಂದ ನಾಕೌಟ್ ಪಂದ್ಯ ಆರಂಭವಾಗಲಿದೆ. ಹಾಲಿ ರನ್ನರ್ ಅಪ್ ನ್ಯೂಜಿಲೆಂಡ್, ಆತಿಥೇಯ ಭಾರತ ತಂಡವನ್ನು ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡಕ್ಕೆ ಇದೀಗ ನಿಜವಾದ ಪರೀಕ್ಷೆ ಪ್ರಾರಂಭವಾಗಿದೆ. ಇಂದು ಐಸಿಸಿ ಏಕದಿನ ವಿಶ್ವಕಪ್ 2023 ಮೊದಲ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ.

ಲೀಗ್ ಹಂತದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಮಿಂಚಿತ್ತು. ಆದರೆ ಅದಕ್ಕೆ ಸೇಡು ತೀರಿಸಿಕೊಳ್ಳಲು ಕಿವೀಸ್ ಕಾಯುತ್ತಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಎರಡೂ ತಂಡಗಳ ಆಟಗಾರರು ಉತ್ತಮ ಫಾರ್ಮ್‌ನಲ್ಲಿರುವುದರಿಂದ ಈ ಪಂದ್ಯ ಭಾರೀ ಫೈಟ್‌ನಿಂದ ಕೂಡಿರಲಿದೆ.

 

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.

 

RELATED ARTICLES

Related Articles

TRENDING ARTICLES