Saturday, January 18, 2025

ಆಸ್ತಿಗಾಗಿ ಪತ್ನಿಯನ್ನೇ ಹತ್ಯೆಗೈದ ಪತಿರಾಯ

ಮಂಡ್ಯ: ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರರೂ ಮೌಲ್ಯದ ಆಸ್ತಿ ಆಸೆಗಾಗಿ ಆಕೆ ಮಲಗಿದ್ದ ಸಮಯದಲ್ಲಿ ಉಸಿರುಗಟ್ಟಿಸಿ ಪತಿಯೇ ಹತ್ಯೆಗೈದಿರುವ ಘಟನೆ ನಗರದ ವಿ.ವಿ.ನಗರ ಬಡಾವಣೆಯಲ್ಲಿ ನಡೆದಿದೆ.

ಎಸ್.ಶೃತಿ (32) ಎಂಬಾಕೆಯೇ ಕೊಲೆಯಾದವಳು. ಟಿ.ಎನ್.ಸೋಮಶೇಖರ್ (41) ಎಂಬಾತನೇ ಕೊಲೆ ಮಾಡಿದ ಪತಿ.

ಎಸ್.ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರು. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದು ಆಸ್ತಿಯನ್ನು ಮಾರಾಟ ಮಾಡಲು ಆಕೆ ಪ್ರಯತ್ನಿಸುತ್ತಿದ್ದರಿಂದ ಇದನ್ನು ಒಪ್ಪದ ಪತಿ ಸೋಮಶೇಖರ್ ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶದಿಂದ ನ.10ರಂದು ರಾತ್ರಿ ಮಲಗಿದ್ದ ಸಮಯದಲ್ಲಿ ದಿಂಬು ಮತ್ತು ಬೆಡ್‌ಶೀಟನ್ನು ಶೃತಿಯ ಮುಖದ ಮೇಲೆ ಬಿಗಿಯಾಗಿ ಅದುಮಿ, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಪೊಲೀಸರೆದರು ತಪ್ಪೊಪ್ಪಿಕೊಂಡಿದ್ದಾನೆ.
ಘಟನೆ ವಿವರ 
ಶ್ರುತಿಯ ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಇದೆ ಎನ್ನಲಾಗಿದೆ. ಅದರಲ್ಲಿ ಒಂದು ಭಾಗವನ್ನು ಮಾರಾಟ ಮಾಡಲು ಶ್ರುತಿ ಮುಂದಾಗಿದ್ದರು. ಆದರೆ, ಪತಿ ಸೋಮಶೇಖರ್‌ ಇದನ್ನು ವಿರೋಧಿಸಿದ್ದ. ಹಾಗಂತ ಅವನು ಒಳ್ಳೆಯ ಕಾರಣಕ್ಕಾಗಿ ಹೀಗೆ ಮಾಡಿದ್ದಲ್ಲ. ಅವನಿಗೆ ಇದ್ದದ್ದು ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶ ಎನ್ನಲಾಗಿದೆ. ಇದೀಗ ಪತ್ನಿಯನ್ನು ಕೊಂದಾದರೂ ಸರಿ ಭೂಮಿ ಮತ್ತು ಆಸ್ತಿಯನ್ನು ಕಬಳಿಸಲು ಮುಂದಾಗಿದ್ದಾನೆ.

ಸೋಮಶೇಖರ್‌ ಆಸ್ತಿ ವಿಚಾರದಲ್ಲಿ ಜಗಳ ಮಾಡುವುದು ಹೊಸತೇನಲ್ಲ. ಹಲವು ಬಾರಿ ರಾಜೀ ಪಂಚಾಯಿತಿ ನಡೆಸಿದ್ದರು ಕಿರುಕುಳ ಮುಂದುವರಿಸಿದ್ದ. ಹೀಗಾಗಿ ಆತನ ಮೇಲೆ ಎಲ್ಲರಿಗೂ ಸಂಶಯವಿತ್ತು. ಶ್ರುತಿ ಸಾವನ್ನಪ್ಪಿದ ಬಳಿಕ ಸಂಬಂಧಿಯೊಬ್ಬರು ಪತಿಯ ಮೇಲೆ ದೂರು ನೀಡಿದ್ದರು. ಯಾವ ಕಾರಣಕ್ಕೂ ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಆರೋಪಿ ಕೊನೆಗೆ ಪೊಲೀಸ್‌ ಟ್ರೀಟ್‌ಮೆಂಟ್‌ಗೆ ಹೆದರಿ ಉಸಿರುಗಟ್ಟಿಸಿ ಕೊಂದಿರುವುದಾಗಿ ಒಪ್ಪಿದ್ದಾನೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

RELATED ARTICLES

Related Articles

TRENDING ARTICLES