Wednesday, January 22, 2025

50ನೇ ಏಕದಿನ ಶತಕ : ಕ್ರಿಕೆಟ್ ದೇವರ ದಾಖಲೆ ಉಡೀಸ್ ಮಾಡಿದ ಕಿಂಗ್ ಕೊಹ್ಲಿ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಏಕದಿನ ಶತಕ (49)ಗಳ ದಾಖಲೆಯನ್ನು ಮುರಿದು 50ನೇ ಶತಕ ದಾಖಲಿಸಿದರು.

106 ಎಸೆತಗಳನ್ನು ಎದುರಿಸಿದ ವಿರಾಟ್ 8 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ನೆರವಿನೊಂದಿಗೆ ಈ ಚರಿತ್ರೆ ಸೃಷ್ಟಿಸಿದ್ದಾರೆ.

ಇದುವರೆಗೆ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪೈಕಿ ತಲಾ 49 ಶತಕ ಸಿಡಿಸಿದ್ದ ಟೀಂ ಇಂಡಿಯಾದ ಮಾಜಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಜಂಟಿ ಅಗ್ರಸ್ಥಾನದಲ್ಲಿದ್ದರು. ಆದರೀಗ ಕಿವೀಸ್ ವಿರುದ್ಧ 50ನೇ ಶತಕ ಪೂರ್ಣಗೊಳಿಸಿರುವ ವಿರಾಟ್ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇದಲ್ಲದೆ ವಿಶ್ವಕ್ರಿಕೆಟ್​ನಲ್ಲಿ 50 ಏಕದಿನ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES