Monday, December 23, 2024

ವಿಪಕ್ಷ ನಾಯಕನ ರೇಸ್​​ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

ಬೆಂಗಳೂರು: ಆರು ತಿಂಗಳಿಂದ ಖಾಲಿ ಇರುವ ಬಿಜೆಪಿ ಹುದ್ದೆ ನಾಳೆ ಫೈನಲ್ ಆಗುವ ಸಾಧ್ಯತೆ ಇದೆ. ಈಗಲೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಾಳೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ನಾಳೆ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆಡಳಿತ ಪಕ್ಷವನ್ನು ಎದುರಿಸುವ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನು ಈ ಸಭೆಗೆ ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದು, ವಿರೋಧ ಪಕ್ಷದ ನಾಯಕ ಆಯ್ಕೆ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

ಇದನ್ನೂ ಓದಿ: Yathindra Siddaramaiah : ಯತೀಂದ್ರ ಸಿದ್ದರಾಮಯ್ಯ ಹೇಳಿದ ಮಹದೇವ್‌ ಯಾರು..?

ಈ ವಿಪಕ್ಷ ನಾಯಕನ ರೇಸ್​ನಲ್ಲಿ ಮೂವರ ಹೆಸರು ಅತಿ ಹೆಚ್ಚಾಗಿ ಕೇಳಿ ಬರುತ್ತಿದೆ. ಶಾಸಕರಾದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್ ಅವರ ಹೆಸರುಗಳು ವಿಪಕ್ಷ ನಾಯಕನ ಹುದ್ದಗಾಗಿ ಇವರುಗಳ ಹೆಸರು ಕೇಳಿ ಬರುತ್ತಿದೆ.

ಇದಕ್ಕೂ ಮೊದಲು ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಲಿಂಗಾಯತ ಸಮುದಾಯದ ನಾಯಕನಿಗೆ ನೀಡುವ ಬಗ್ಗೆ ಬಗ್ಗೆ ಚರ್ಚೆಯಲ್ಲಿ ಇತ್ತು.

ನಾಳಿನ ಬಿಜೆಪಿ ಪಕ್ಷದಲದಲಿ ಯಾರು ವಿಪಕ್ಷನಾಯಕ ಎಂದು ತಿಳಿಯುತ್ತದೆ.

RELATED ARTICLES

Related Articles

TRENDING ARTICLES