Wednesday, January 22, 2025

‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR

ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಬಿತ್ತಿಪತ್ರ ಅಂಟಿಸಿದ್ದಕ್ಕೆ ಶ್ರೀರಾಂಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದ ಗೋಡೆಗಳಿಗೆ ಪೋಸ್ಟರ್ ಅಂಟಿಸಿದ್ದು, ಈ ಸಂಬಂಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್​​ಗೌಡ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿಂದುಗೌಡ, ನವೀನ್​ಗೌಡ ಸೇರಿದಂತೆ ಒಟ್ಟು 6 ಜನರು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ: HDK ತರಾಟೆ

ಜೆಡಿಎಸ್​ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಪೋಸ್ಟರ್​ ಅಂಟಿಸಿದ್ದಾರೆ. ಹಾಗೂ ಇದನ್ನು ತಡೆಯಲು ಬಂದ ಸೆಕ್ಯೂರಿಟಿ ಮೇಲೆ ಕೀ ಬಂಚ್​ನಿಂದ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಗೌಡ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವಹೇಳನಕಾರಿ ಪೋಸ್ಟರ್​ ಅಂಟಿಸಿ ಸೆಕ್ಯೂರಿಟಿಗೆ ಬೆದರಿಸಿದ ಆರೋಪ ಮೇರೆಗೆ ಶ್ರೀರಾಮಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 448, 504, 324, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬಿಂದುಗೌಡ A-5, ನವೀನ್​ಗೌಡ A-6 ಆರೋಪಿಯಾಗಿದ್ದಾರೆ.

RELATED ARTICLES

Related Articles

TRENDING ARTICLES