ಮೈಸೂರು : ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರರ ವಿಡಿಯೋ ವೈರಲ್ ಆಗಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹಾರಿಕೆಯ ಉತ್ತರ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೈರಲ್ ಆಗಿರುವ ಯತೀಂದ್ರ ಆ ವಿಡಿಯೋ ನಾನು ನೋಡೂ ಇಲ್ಲ, ಕೇಳೂ ಇಲ್ಲ, ನನಗೆ ಗೊತ್ತೇ ಇಲ್ಲ ಎಂದು ಜಾರಿಕೊಂಡಿದ್ದಾರೆ.
ವರ್ಗಾವಣೆ ಮಾಡುವುದು ಮುಖ್ಯಮಂತ್ರಿಯವರ ಪರಮಾಧಿಕಾರ ಎಂದು ಬರೋಬ್ಬರಿ ಆರು ಬಾರಿ ಒಂದೇ ಹೇಳಿಕೆ ಪುನರುಚ್ಛರಿಸಿದ್ದಾರೆ. ಯಾರು ಏನೇ ಹೇಳಬಹುದು. ವರ್ಗಾವಣೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲ. ಆ ರೀತಿ ಪ್ರಕರಣ ನಡೆದಿದ್ದರೆ ಕಾನೂನು ತನ್ನ ಕ್ರಮ ನಿರ್ವಹಿಸುತ್ತೆ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.
ಸಿಎಂ ಪುತ್ರನ ಪರ ರೇವಣ್ಣ ಬ್ಯಾಟ್
ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧಿಕಾರ ಇದ್ದಾಗ ಕೆಲಸ ಮಾಡಬೇಕು ಅಂತ ಹೇಳ್ತಾರೆ, ಅದು ತಪ್ಪ? ಅವರೂ ಶಾಸಕರಾಗಿದ್ದರು, ಕೆಲಸ ಆಗಬೇಕು ಅಂತ ಹೇಳಿರಬಹುದು ಎಂದು ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ.