Wednesday, January 22, 2025

ಮೊಹಮ್ಮದ್​ ಹಫೀಜ್​ ಕಾಲೆಳೆದ ಮೈಕಲ್‌ ವಾನ್!

ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 2023ರ ವಿಶ್ವಕಪ್​ನ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದ ವಿರಾಟ್ ಕೊಹ್ಲಿ ತಮ್ಮ 50ನೇ ODI ಶತಕವನ್ನು ಗಳಿಸಿದ್ದಾರೆ. ಆ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಮೊದಲ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲದೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್​ ದಾಖಲೆಯನ್ನು ಮುರಿದಿದ್ದಾರೆ.

ಸದ್ಯ ವಿರಾಟ್​​ ಕೊಹ್ಲಿಯ ಐತಿಹಾಸಿಕ ಸಾಧನೆ ಬಳಿಕ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್ ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್​ ಹಫೀಜ್​ ಕಾಲೆಳೆದಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಫೈನಲ್​​​ ಪ್ರವೇಶಿಸಿದ ಟೀಂ ಇಂಡಿಯಾ!

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೊಲ್ಕತ್ತಾದ ಈಡನ್​ ಗಾರ್ಡ್​ನ್ಸ್​ಲ್ಲಿ ನಡೆದ ಪಂದ್ಯದಲ್ಲಿ ತನ್ನ 49 ನೇ ODI ಶತಕದ ನಂತರ ಭಾರತ ತಂಡದ ಆಟಗಾರ ವಿರಾಟ್ ಕೊಹ್ಲಿಯನ್ನು ಸ್ವಾರ್ಥಿ ಎಂದು ಕರೆದಿದ್ದ ಮೊಹಮ್ಮದ್​ ಹಫೀಜ್​​ರನ್ನು ಕೆಣಕಿದ್ದಾರೆ. ಹಫೀಜ್​ರನ್ನು ಟ್ಯಾಗ್ ಮಾಡಿರುವ ಮೈಕಲ್‌ ವಾನ್, ‘ಮತ್ತೊಂದು ಸ್ವಾರ್ಥಿ ನೂರು’ ಎಂದು ತಮ್ಮ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES