Wednesday, January 22, 2025

ಭ್ರಷ್ಟಾಚಾರದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ: ಜಗದೀಶ್ ಶೆಟ್ಟರ್ 

ಹುಬ್ಬಳ್ಳಿ: ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾದ ಈ ರೀತಿ ಆರೋಪ‌ ಸಹಜ. ಯಾವುದೇ ಭ್ರಷ್ಟಾಚಾರದ ಬಗ್ಗೆ ಸ್ಪಷ್ಟತೆ ಇಲ್ಲ. ಇದು ಕೇವಲ ಹಿಟ್ ಆ್ಯಂಡ್ ರನ್ ರೀತಿ‌ ಆರೋಪಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಿಎಂ‌ ಪುತ್ರ ಯತೀಂದ್ರ ವೀಡಿಯೋ ವೈರಲ್ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾದ ಈ ರೀತಿ ಆರೋಪ‌ ಸಹಜ. ಯಾವುದೇ ಭ್ರಷ್ಟಾಚಾರದ ಬಗ್ಗೆ ಸ್ಪಷ್ಟತೆ ಇಲ್ಲ. ಇದು ಕೇವಲ ಹಿಟ್ ಆ್ಯಂಡ್ ರನ್ ರೀತಿ‌ ಆರೋಪಗಳು. ಯಾವುದೇ ಒಂದು ಭ್ರಷ್ಟಾಚಾರದ ಬಗ್ಗೆ ಆಧಾರ ಸಹಿತ ಆರೋಪ ಮಾಡುವ ಕೆಲಸಗಳಾಗುತ್ತಿಲ್ಲ ಎಂದರು.

ಇದನ್ನೂ ಓದಿ: ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ : ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ 

40 ಕೋಟಿ ಹಣದ ಬಗ್ಗೆ ಬಿಜೆಪಿಯವರು ಆರೋಪ ಮಾಡಿದ್ದರು. ಅದರ ಬಗ್ಗೆ ಆಧಾರ ನೀಡಿ. ಕೇವಲ ಮಾದ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳಿಂದ ಆರೋಪ‌ ಮಾಡುತ್ತಾರೆ. ಯತೀಂದ್ರ ಅವರ ವೀಡಿಯೋ‌ ಪ್ರಕರಣದ ಬಗ್ಗೆ ಸುಖಾಸುಮ್ಮನೇ ಆರೋಪ ಮಾಡೋದು ಸರಿಯಲ್ಲ. ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋದು ಸ್ಷಷ್ಟವಾಗಿ ಆರೋಪ ಮಾಡಲಿ ಎಂದು ವಾಗ್ವಾದ ಮಾಡಿದ್ದಾರೆ.

 

 

RELATED ARTICLES

Related Articles

TRENDING ARTICLES