Monday, December 23, 2024

RTO ಕಚೇರಿಯಲ್ಲಿ ಲಂಚಾವತಾರ: ಲೋಕಾಯುಕ್ತ ಅಧಿಕಾರಿಗಳು ದಾಳಿ!

ಬಳ್ಳಾರಿ: ಬಳ್ಳಾರಿ ಆರ್​.ಟಿ.ಒ ಕಚೇರಿಯಲ್ಲಿ ಲಂಚಾವತಾರ ಮಿತಿಮೀರಿದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಆರ್​.ಟಿ.ಒ. ಅಧೀಕ್ಷಕ ಚಂದ್ರಕಾಂತ್​ ಗುಡಿಮನಿ ಮತ್ತು ಏಜೆಂಟ್​ ಮೊಹಮ್ಮದ್​ ರಾಜ್​ ಲಂಚ ಪಡೆಯುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಇಂದಿನಿಂದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗದಲ್ಲಿ ಟೋಲ್ ಸಂಗ್ರಹ!

ಗುರುವಾರ ರಾತ್ರಿ 10.20ರ ಸಮಯದಲ್ಲಿ ನಗರದ ಕಚೇರಿಯಲ್ಲಿ 15 ಸಾವಿರ ರೂ.ಗಳ ಲಂಚಾ ಪಡೆಯುತ್ತಿದಾಗ ಚಂದ್ರಕಾಂತ್ ಮತ್ತು ಮೊಹಮ್ಮದ್​ ರಾಜ್ ರನ್ನು ಸಾಕ್ಷಿ ಸಮೇತವಾಗಿ ವಶಕ್ಕೆ ಪಡೆಯಲಾಯಿತು. ಸದ್ಯ ಇಬ್ಬರನ್ನು ಬಳ್ಳಾರಿಯ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಬೆಳಿಗ್ಗೆ ಆರೋಪಿಗಳನ್ನು ನ್ಯಾಯಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಸಾರ್ವಜನಿಕರಿಂದ ಆರ್.ಟಿ.ಓ ಅಧಿಕಾರಿಗಳ ಮೇಲೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದವು, ಇತ್ತೀಚೆಗೆ ನಗರ ಶಾಸಕ ಭರತ್ ರೆಡ್ಡಿ ಅವರು ಈ ಕುರಿತು ಆರ್.ಟಿ.ಓ ಕಛೇರಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

RELATED ARTICLES

Related Articles

TRENDING ARTICLES