Wednesday, January 22, 2025

ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಈ ಬಾರಿಯ ಆಕರ್ಷಣೆಗಳೇನು?

ಬೆಂಗಳೂರು : ನಾಲ್ಕು ದಿನಗಳ ಕಾಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆರಂಭವಾಗಿದ್ದು, ರೈತರಿಗೆ ಬರ ನಿರೋಧಕ ತಳಿಗಳು ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಮಾಹಿತಿ ನೀಡಲಾಗುತ್ತದೆ.

ಕೃಷಿ ಹಾಗೂ ಅದರ ಪೂರಕ ಕಸುಬುಗಳಲ್ಲಿ ತೊಡಗಿಸಿಕೊಳ್ಳುವ ಸಮಗ್ರ ಮಾಹಿತಿಯನ್ನು ರೈತರಿಗೆ ನೀಡಲು ವಿವಿ ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಸೇರಿ 500ಕ್ಕೂ ಹೆಚ್ಚು ಮಂದಿಯನ್ನು ಬಳಸಿಕೊಳ್ಳಲಾಗುತ್ತಿದೆ.ಬರ ನಿರ್ವಹಣೆ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಲಾಗುವುದು.

ಈ ಸಲದ ಕೃಷಿ ಮೇಳದ ಆಕರ್ಷಣೆಗಳೇನು..? 

ರೈತರ ಆವಿಷ್ಕಾರ ಹಾಗೂ ಕೃಷಿ ನವೋದ್ಯಮ, ಕೃಷಿಯಲ್ಲಿ ನೂತನ ತಂತ್ರಜ್ಞಾನಗಳ ಬಗ್ಗೆ ಮಾಹಿತಿ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಖುಷಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ, ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಣ್ಣು ಪರೀಕ್ಷೆಗೆ ಅನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.

ಕೃಷಿ ಮೇಳ- 2023 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾದರಿ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಶಾಸಕ ಶರತ್ ಬಚ್ಚೇಗೌಡ, ಕುಲಪತಿ ಡಾ. ಎಸ್.ವಿ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

 

RELATED ARTICLES

Related Articles

TRENDING ARTICLES