Saturday, November 23, 2024

ರಾಮ ಮಂದಿರ ನಿರ್ಮಾಣ: ಭಾರತೀಯರ ಕನಸು ನನಸಾಗುತ್ತಿದೆ- ಪೇಜಾವರ ವಿಶ್ವಪ್ರಸನ್ನ ತೀರ್ಥ

ಮಂಗಳೂರು: ಭಾರತೀಯರ ಕನಸು ನನಸಾಗುತ್ತಿದೆ. ಹಲವು ಹೋರಾಟಗಳ ಬಳಿಕ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಮಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು, ಮಕರ ಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆ ಆಗುತ್ತಿದೆ. ಜನವರಿ 22ರ ಅಭಿಜಿತ್ ಮುಹೂರ್ತ ರಾಮದೇವರ ಪ್ರಾಣ ಪ್ರತಿಷ್ಠೆ ಯಾಗಲಿದೆ. ಪ್ರಧಾನಿ ಮೋದಿ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಆ ದಿನ ಎಲ್ಲರಿಗೂ ಬರಲು ಅವಕಾಶ ಇರೋದಿಲ್ಲ. ಹೀಗಾಗಿ ಎಲ್ಲರೂ ಊರ ರಾಮಮಂದಿರದಲ್ಲಿ ಬೃಹತ್ ಪರದೆಯ ಮೂಲಕ ವೀಕ್ಷಣೆ ಮಾಡಬೇಕು.

ಇದನ್ನೂ ಓದಿ: ಜಮೀರ್​ ಹೇಳಿಕೆಗೆ ಗರಂ ಆದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ!

ಮಂದಿರದಲ್ಲಿ ಪೂಜೆ ಭಜನೆ ಪ್ರಸಾದ ವಿತರಣೆ ಮಾಡಬೇಕು. ಪ್ರಾಣ ಪ್ರತಿಷ್ಠೆ ಆದ ಬಳಿಕ ಮಂಡಲ ಉತ್ಸವ ನಡೆಯುತ್ತದೆ ನಿತ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ನಡೆಯುತ್ತದೆ. ಆ ಸಂದರ್ಭದಲ್ಲಿ ಎಲ್ಲರೂ ಬಂದು ಪೂಜೆ ಸಲ್ಲಿಸಬಹುದು. ರಾಮಭಕ್ತಿ ಬೇರೆ ಅಲ್ಲ, ದೇಶ ಭಕ್ತಿ ಬೇರೆ ಅಲ್ಲ ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ. ಶ್ರೀ ರಾಮ ಮಂದಿರ ಉದ್ಘಾಟನಾ ಉತ್ಸವಕ್ಕೆ ಆಹ್ವಾನ ಬಂದಿಲ್ಲ ಅಂದರೆ ನಾನೇ ಆಹ್ವಾನ‌ ಕಳುಸುತ್ತೇನೆ ಎಂದರು.

RELATED ARTICLES

Related Articles

TRENDING ARTICLES