Monday, December 23, 2024

ಸಚಿವ ಜಮೀರ್ ಅಹ್ಮದ್​​ ಮತ್ತೊಂದು ಎಡವಟ್ಟು!

ತೆಲಂಗಾಣ: ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: RTO ಕಚೇರಿಯಲ್ಲಿ ಲಂಚಾವತಾರ: ಲೋಕಾಯುಕ್ತ ಅಧಿಕಾರಿಗಳು ದಾಳಿ!

ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

RELATED ARTICLES

Related Articles

TRENDING ARTICLES