Wednesday, January 22, 2025

NEP ರದ್ದುಗೊಳಿಸುವುದು ಬೇಡ : ಸರ್ಕಾರದ ನಡೆ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಶಿವಮೊಗ್ಗ : ರಾಜ್ಯದಲ್ಲಿ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯನ್ನು ರದ್ದುಗೊಳಿಸುವ ರಾಜ್ಯ ಕಾಂಗ್ರೆಸ್​ ಸರ್ಕಾರದ ನಡೆಯನ್ನು ಖಂಡಿಸಿ ಮತ್ತು ಇದರ ವಿರುದ್ಧ ಎಬಿವಿಪಿ ಕಾರ್ಯಕರ್ತರು ಶಿವಮೊಗ್ಗದಲ್ಲಿ ಸಹಿ ಸಂಗ್ರಹಣೆ ಕಾರ್ಯ ನಡೆಸಿದರು. 

ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಸಹಿ ಸಂಗ್ರಹಣೆ ಮಾಡಿ, ರಾಜ್ಯ ಸರ್ಕಾರಕ್ಕೆ ರವಾನಿಸಿದರು. ರಾಜ್ಯದ ವಿದ್ಯಾರ್ಥಿಗಳ ಹಾಗೂ ಪೋಷಕರ ಹಿತಾಸಕ್ತಿಯನ್ನು ಕಡೆಗಣಿಸಿ ಎನ್‍ಇಪಿ ರದ್ದುಗೊಳಿಸುವ ನಿರ್ಧಾರ ಮಾಡಲಾಗಿದೆ. ಇದರಿಂದ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಾಗುತ್ತದೆ ಎಂದು ಅಸಮಾಧಾನ ಹೊರಹಾಕಿದರು.

ಎನ್​ಇಪಿ ರದ್ದುಪಡಿಸುವ ಮುನ್ನ ಚರ್ಚೆಯನ್ನೆ ಮಾಡಿಲ್ಲ. ಇದು ವಿದ್ಯಾರ್ಥಿಗಳ ವಿರೋಧಿಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಇದನ್ನು ರದ್ದುಮಾಡಬಾರದೆಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಎನ್‍ಇಪಿಯ ತ್ರಿಭಾಷಾ ಸೂತ್ರದ ಅನ್ವಯದಲ್ಲಿ ಹೆಚ್ಚಿನ ಮುಕ್ತತೆ ಇದೆ. ಪ್ರಾದೇಶಿಕ ಭಾಷೆಯ ಅವಗಣನೆ ಆಗಿಲ್ಲ. ಸಹಬಾಳ್ವೆ, ಸಮಾನತೆ, ರಾಷ್ಟ್ರೀಯತೆ, ಭಾರತೀಯತೆಗೆ ಮಹತ್ವ ನೀಡಿರುವುದು ತಪ್ಪು ಹೇಗಾಗುತ್ತದೆ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ.

ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ

ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ, ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು.

RELATED ARTICLES

Related Articles

TRENDING ARTICLES