Thursday, December 19, 2024

ಯಾವ ಸಮುದಾಯಕ್ಕೆ ವಿಪಕ್ಷ ನಾಯಕನ ಸ್ಥಾನ ಕೊಡಬೇಕು ಅಂತ ಹೈಕಮಾಂಡ್ ಮನಸಲ್ಲಿದೆ : ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ವಿಪಕ್ಷ ನಾಯಕರ ಆಯ್ಕೆ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾವ ಸಮುದಾಯಕ್ಕೆ ವಿಪಕ್ಷ ನಾಯಕನ ಸ್ಥಾನ ಕೊಡಬೇಕು ಅಂತ ಹೈಕಮಾಂಡ್ ಮನಸಲ್ಲಿದೆ. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ವೀಕ್ಷಕರು ಬಂದಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು, ಯಾರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂಬ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇವತ್ತೇ ಘೋಷಣೆ ಮಾಡಬಹುದು ಅಥವಾ ದೆಹಲಿಗೆ ಹೋಗಿ ಘೋಷಣೆ ಮಾಡಬಹುದು ಎಂದು ತಿಳಿಸಿದ್ದಾರೆ.

ಸಭೆಗೆ ಕೆಲ ನಾಯಕರು ಬರದಿರಬಹುದು

ಇಂದಿನ ಸಭೆಗೆ ಯಾರೋ ಒಬ್ಬಿಬ್ಬರು ಬರದಿರಬಹುದು. ಅದು ಮುಖ್ಯ ಆಗಲ್ಲ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಲಾಗುತ್ತದೆ. ಯಾರಿಗೆ ವಿಪಕ್ಷ ನಾಯಕನ ಸ್ಥಾನ ಕೊಡಬೇಕು  ಅಂತ ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದಾರೆ. ಇನ್ನೂ ಸ್ಪೀಕರ್ ಬಗ್ಗೆ ಸಚಿವ ಬಿ.ಝಡ್​. ಜಮೀರ್ ಅಹಮ್ಮದ್ ಖಾನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಅದಕ್ಕೆಲ್ಲ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES