Monday, December 23, 2024

ಇಂದಿನಿಂದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗದಲ್ಲಿ ಟೋಲ್ ಸಂಗ್ರಹ!

ಬೆಂಗಳೂರು ಗ್ರಾಮಾಂತರ: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ, ಸರಕು ಸಾಗಣೆ ವಾಹನಗಳ ತಡೆರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸ್ಯಾಟಲೈಟ್​ ಟೌನ್ ರಿಂಗ್​ ರೋಡ್​​ನ ಮೊದಲ ಹಂತದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗ ಸಂಚಾರಕ್ಕೆ ಮುಕ್ತವಾಗಿದೆ.

ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಆರಂಭಗೊಂಡು ಹೊಸಕೋಟೆ ವರೆಗಿನ ನಾಲ್ಕು ಪಥ ರಸ್ತೆಯ 47 ಕಿ.ಮಿ.ನಿಂದ 76.150 ಕಿ.ಮಿ ವರೆಗೆ ಬಳಕೆದಾರರಿಗೆ ನಲ್ಲೂರು ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಮಾಡಲಾಗುತ್ತದೆ.

ಇದನ್ನೂ ಓದಿ: ಟೆಲಿಗ್ರಾಂ, ಫೋನ್‌ಪೇ ಪೇಟಿಎಂ ವಿರುದ್ಧ ಕೇಸ್‌!

ಇದು 2024ರ ಮಾರ್ಚ್‌31 ರವರೆಗೆ ಜಾರಿಯಲ್ಲಿರಲಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

RELATED ARTICLES

Related Articles

TRENDING ARTICLES