Tuesday, May 14, 2024

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ : ಪ್ರಮೋದ್ ಮುತಾಲಿಕ್

ಬೆಳಗಾವಿ : ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ ಶಾಸಕರು ಕೈ ಮುಗಿಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಮೀರ್ ಅಹ್ಮದ್ ಒಬ್ಬ ಮತಾಂಧ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಮೀರ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಬೇಕು. ಜಮೀರ್ ಅಹ್ಮದ್ ಅವರ ಹೇಳಿಕೆ ನಾನು ವಿರೋಧಿಸುತ್ತೇನೆ. ಸಭಾಧ್ಯಕ್ಷ ಸ್ಥಾನ ಅತ್ಯಂತ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕೂತವರು ವ್ಯಕ್ತಿಯಲ್ಲ, ಅದೊಂದು ಶಕ್ತಿ. ಜಾತಿ, ಪಕ್ಷ, ಧರ್ಮ, ಭಾಷೆ ಬೇಧವಿಲ್ಲದೇ ಕುಳಿತಿರುವ ವ್ಯಕ್ತಿಯನ್ನು ಮುಸ್ಲಿಂ ಎಂದು ಗುರುತಿಸಿದ್ದು ಸಂವಿಧಾನ ವಿರೋಧಿ ಎಂದು ಹರಿಹಾಯ್ದಿದ್ದಾರೆ.

ಮಸೀದಿಯ ಮೌಲ್ವಿ ಹುದ್ದೆಯಲ್ಲ

ವಿಧಾನಸಭೆಯ ಸ್ಪೀಕರ್​​ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ. ಸ್ಪೀಕರ್​ಗೆ ಸಿಗುವುದು ಜಾಮಿ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES