Sunday, December 22, 2024

ವಿಪಕ್ಷದವರ ಟೀಕೆ ಅಭಿವೃದ್ಧಿಗೆ ಪೂರಕವಾಗಿರಬೇಕು : ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ವಿಪಕ್ಷದವರ ಟೀಕೆ ಜನರ ಅಭಿವೃದ್ಧಿಗೆ ಪೂರಕವಾಗಿ ಇರಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತೀಂದ್ರ ವರುಣ ಕ್ಷೇತ್ರದ ಮಾಜಿ ಶಾಸಕ, ಅವರ ತಂದೆ ಸಿಎಂ. ಹೀಗಿರುವಾಗ ಆ ಕ್ಷೇತ್ರದ ಕೆಲಸವನ್ನು ನೋಡಿಕೊಂಡರೆ ತಪ್ಪೇನು? ನಮ್ಮ ಕ್ಷೇತ್ರಕ್ಕೆ ಇಂತಹ ಅಧಿಕಾರಿ ಹಾಕಿ ಅನ್ನೋದರಲ್ಲಿ ತಪ್ಪೇನು? ಸಾರ್ವಜನಿಕರೇ ನಮ್ಮ ಕ್ಷೇತ್ರಕ್ಕೆ ಇಂತಹ ಅಧಿಕಾರಿ ಬೇಕು ಅಂತಾರೆ ಎಂದರು.

ಇದನ್ನೂ ಓದಿ: ಒಬ್ಬರಿಂದ ಹೇಗೆ ರೇಪ್ ಮಾಡಲು ಸಾಧ್ಯ? : ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮಾಜಿ ಶಾಸಕ

ಕುಮಾರಸ್ವಾಮಿ ಕುಟುಂಬದವರು ಅಧಿಕಾರದಲ್ಲಿದ್ದಾಗ ಏನು ಮಾಡಿಲ್ವೇ? ಮಾಜಿ ಸಿಎಂ ಕುಮಾರಸ್ವಾಮಿಗೆ ಅಧಿಕಾರ ಬಿಟ್ಟು ಇರೋಕೆ ಆಗಲ್ಲ. ಹೆಚ್​.ಡಿ.ಕುಮಾರಸ್ವಾಮಿಗೆ ಅಧಿಕಾರ ಕೊಟ್ಟರೆ ನಿಭಾಯಿಸಲು ಆಗಲ್ಲ. ಕುಮಾರಸ್ವಾಮಿ ನೆಮ್ಮದಿಯಿಂದ ಇರಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿಯ ವಿರುದ್ಧ ಕಿಡಿಕಾರಿದ್ದಾರೆ.

 

 

 

RELATED ARTICLES

Related Articles

TRENDING ARTICLES