Monday, December 23, 2024

ಆಪದ್ಬಾಂಧವ.. ಕಿಂಗ್ ಕೊಹ್ಲಿ ಅರ್ಧಶತಕ

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್-2023 ಫೈನಲ್ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು.

81 ರನ್​ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಆಪದ್ಬಾಂಧವರಾಗಿದ್ದಾರೆ. 52 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನೊಂದಿಗೆ ವಿರಾಟ್ ಅರ್ಧಶತಕ ಸಿಡಿಸಿದ್ದಾರೆ. ಕೊಹ್ಲಿ ವಿಶ್ವಕಪ್​ನಲ್ಲಿ 9ನೇ 50+ ಸ್ಕೋರ್ ಸಿಡಿಡಿದ್ದಾರೆ. ಇದು ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಅವರ 72ನೇ ಅರ್ಧಶತಕವಾಗಿದೆ.

ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅವರೊಂದಿಗೆ 66 ರನ್​ಗಳ ಜೊತೆಯಾಟ ಪ್ರದರ್ಶಿಸಿದ್ದಾರೆ. ಇನ್ನೂ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡುತ್ತಿರುವ ಕೆ.ಎಲ್ ರಾಹುಲ್ 67 ಎಸೆತಗಳಲ್ಲಿ 37 ರನ್​ ಸಿಡಿಸಿದ್ದಾರೆ.

RELATED ARTICLES

Related Articles

TRENDING ARTICLES