Thursday, December 26, 2024

ಫೈನಲ್ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಬೆಂಗಳೂರು : ಏಕದಿನ ವಿಶ್ವಕಪ್‌-2023 ಟೂರ್ನಿಯ ಸೆಮಿಫೈನಲ್‌ ಹಾಗೂ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ರನ್ ಮೆಷಿನ್ ವಿರಾಟ್‌ ಕೊಹ್ಲಿ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್​​​ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಅರ್ಧಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆ ಬರೆದಿದ್ದಾರೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಬಹುಬೇಗ ಶುಭ್​ಮನ್‌ ಗಿಲ್‌ ಅವರ ವಿಕೆಟ್ ಅನ್ನು ಕಳೆದುಕೊಂಡಿತು. ಆ ಮೂಲಕ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ವಿರಾಟ್‌ ಕೊಹ್ಲಿ ತಾಳ್ಮೆಯ ಇನಿಂಗ್ಸ್ ಆಡಿದರು.

ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 54 ರನ್‌ ಗಳಿಸಿದರು. ಆ ಮೂಲಕ ಭಾರತ ತಂಡದ ಮೊತ್ತವನ್ನು 100ರ ಗಡಿ ದಾಟಿಸಲು ನೆರವಾದರು. ಅಂತಿಮವಾಗಿ ಭಾರತ 50 ಓವರ್​ಗಳಲ್ಲಿ 240 ರನ್ ಗಳಿಸಿತು.

RELATED ARTICLES

Related Articles

TRENDING ARTICLES