Sunday, December 22, 2024

ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ ವೀಕ್ಷಿಸುತ್ತಿರುವ ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಅವರು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ವಿಶ್ವಕಪ್ ಪೈನಲ್ ಪಂದ್ಯವನ್ನ‌ ಮೊಮ್ಮಕ್ಕಳ‌ ಜೊತೆ ಕುಳಿತು ವೀಕ್ಷಣೆ ಮಾಡುತ್ತಿದ್ದಾರೆ.

2023ರ ವಿಶ್ವಕಪ್‌ನ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪ್ರಸ್ತುತ ಭಾರತ 41 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್​ ಗಳಿಸಿದೆ.

ಭಾರತದ ಪರ ನಾಯಕ ರೋಹಿತ್ ಶರ್ಮಾ 47, ವಿರಾಟ್ ಕೊಹ್ಲಿ 54, ಶುಭ್​ಮನ್ ಗಿಲ್ 4, ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಔಟಾಗಿದ್ದಾರೆ. ಕೆ.ಎಲ್. ರಾಹುಲ್ ಅಜೇಯ 66 ಹಾಗೂ ಸುರ್ಯಕುಮಾರ್ ಯಾದವ್ ಅಜೇಯ 9 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿಸಿದೆ.

RELATED ARTICLES

Related Articles

TRENDING ARTICLES