Monday, December 23, 2024

ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ ವೀಕ್ಷಿಸುತ್ತಿರುವ ಹೆಚ್.ಡಿ. ದೇವೇಗೌಡ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ವಿಶ್ವಕಪ್ ಪೈನಲ್ ಪಂದ್ಯವನ್ನು ವೀಕ್ಷಿಸಿದರು.

ವಿಶ್ವಕಪ್‌-2023 ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹೆಚ್.ಡಿ ದೇವೇಗೌಡ ಅವರು ತಮ್ಮ ನಿವಾಸದಲ್ಲಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುತ್ತಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್ ಗಳಿಸಿದೆ. 241 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ತಂಡ 3 ವಿಕೆಟ್ ಕಳೆದುಕೊಂಡು 87 ರನ್​ ಗಳಿಸಿದೆ. ಭಾರತದ ಪರ ಜಸ್ಪ್ರೀತ್​ ಬುಮ್ರಾ 2 ಹಾಗೂ ಮೊಹಮ್ಮದ್ ಶಮಿ ಒಂದು ವಿಕೆಟ್ ಪಡೆದಿದ್ದಾರೆ. ಸದ್ಯ ಟ್ರಾವಿಸ್ ಹೆಡ್​ 27 ಹಾಗೂ ಮಾರ್ನಸ್‌ ಲಬುಶಂಗೆ 8 ರನ್​ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಭಾರತದ ಗೆಲುವಿಗೆ ಪ್ರಾರ್ಥನೆ

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿಸಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES