Thursday, December 19, 2024

ಸಾಬ್ರು ಅಂತ ತಲೆಬಾಗುತ್ತಾರೆ ಎನ್ನುವುದು ಜಮೀರ್ ಉದ್ಧಟತನ : ಎಂ.ಪಿ ರೇಣುಕಾಚಾರ್ಯ

ದಾವಣಗೆರೆ : ಸಾಬ್ರು ಅಂತ ತಲೆಬಾಗುತ್ತಾರೆ ಎನ್ನುವುದು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಉದ್ಧಟತನದ ಹೇಳಿಕೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್​ ಅಹ್ಮದ್ ಅವ​​ರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾರು ಹೆಚ್ವು ಜನಾದೇಶ ನೀಡುತ್ತಾರೆಯೋ ಅವರು ಸ್ವೀಕರ್ ಆಗಿರುತ್ತಾರೆ. ಸ್ಪೀಕರ್ ಪೀಠಕ್ಕೆ ಜಮೀರ್ ಅಹ್ಮದ್ ಅವಮಾನ ಮಾಡಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಈ ರೀತಿ ಮಾತಾಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರಿ​​​ಗೆ ಸಿಎಂ ಮುಖ್ಯಮಂತ್ರಿ ಅವರಿಂದ ಹಿಡಿದು ಎಲ್ಲರೂ ಕೂಡ ತಲೆಬಾಗಬೇಕು ಎಂದು ಹೇಳಿದ್ದಾರೆ.

ಸಚಿವ ಸಂಪುಟದಿಂದ ವಜಾಗೊಳಿಸಬೇಕು

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಕೂಡ ಓಲೈಕೆ ಮಾಡಿದ್ರು. ಕ್ಷಮೆ ಕೇಳೋದಷ್ಟೇ ಅಲ್ಲ, ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಸಿಎಂ ಸಿದ್ದರಾಮಯ್ಯನವರನ್ನು ಒತ್ತಾಯ ಮಾಡುತ್ತೇನೆ ಎಂದು ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ಜಮೀರ್ ಹೇಳಿದ್ದೇನು?

ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಜಮೀರ್ ಅಹ್ಮದ್ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

RELATED ARTICLES

Related Articles

TRENDING ARTICLES