Monday, December 23, 2024

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ : ವಿದ್ಯುತ್ ತಂತಿ ತುಳಿದು ತಾಯಿ- ಮಗು ಸಾವು : ಎಇ-ಎಇಇ ಅಮಾನತು

ಬೆಂಗಳೂರು: ನಗರದ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್​ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಘಟನೆಗೆ ಕಾರಣರಾದ ಎಇ, ಎಇಇರನ್ನು ಅಮಾನತುಗೊಳಿಸಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದೇವೆ. ನಿರ್ಲಕ್ಷ್ಯವಹಿಸಿದ್ರೆ ಉಳಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾಗೆ 241 ರನ್ ಟಾರ್ಗೆಟ್ ನೀಡಿದ ಭಾರತ

ಘಟನೆಯ ವಿವರ 

ಇಂದು ಬೆಳಗ್ಗೆ ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

 

RELATED ARTICLES

Related Articles

TRENDING ARTICLES