ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ, ಅವರು ಭಾರಿ ಭ್ರಷ್ಟರಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೋಮಡಿದ್ದಾರೆ.
ಯತೀಂದ್ರರನ್ನು ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಅವರನ್ನೇ ಕೇಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸುವ ಭರದಲ್ಲಿ ಯತೀಂದ್ರ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಮತ್ತು ಯತೀಂದ್ರ ಹೆಸರನ್ನು ಗೊಂದಲ ಮಾಡಿಕೊಂಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಅವರು ವಿಜಯೇಂದ್ರ ಬಗ್ಗೆ ಮಾತನಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿಗರು ಇದಕ್ಕೆ ಉತ್ತರ ನೀಡಬೇಕು
ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂದು ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೇಳಗೆ ಇಳಿಸಲಾಗಿತ್ತು. ಆರ್‍ಎಸ್‍ಎಸ್ ಮತ್ತು ಕೇಂದ್ರ ಸರ್ಕಾರ ವಿಜಯೇಂದ್ರರ ಹಸ್ತಕ್ಷೇಪಕ್ಕೆ ಬೇಸತ್ತು ಬಿಎಸ್‍ವೈ ಅವರನ್ನು ಕೆಳಗಿಸಿತ್ತು. ಈಗ ಅದೇ ವಿಜಯೇಂದ್ರರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಬಿಜೆಪಿ ನಾಯಕರು ಇದಕ್ಕೆ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.