ತೆಲಂಗಾಣ : ಪಂಚ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ.
ತೆಲಂಗಾಣ ರಾಜ್ಯದ ಜಗ್ತಿಯಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮರು ಹಂಚಿಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
SC, ST ಹಾಗೂ OBC ಸಮುದಾಯಕ್ಕೆ ಮೀಸಲಾತಿ ಮರು ಹಂಚಿಕೆ ಮಾಡಬೇಕಿದೆ. ಹೀಗಾಗಿ, ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
ಸಕ್ಕರೆ ಕಾರ್ಖಾನೆಗಳ ಪುನಶ್ಚೇತ
ಓವೈಸಿ ಓಲೈಕೆ ನೀತಿಯಿಂದ ದೂರವಿಲ್ಲ. ಬಿಆರ್‌ಎಸ್‌ನ ‘ಕಾರ್’ ಸ್ಟೀರಿಂಗ್ ಕೆಸಿಆರ್ ಬಳಿ ಇಲ್ಲ, ಕೆಟಿಆರ್ ಬಳಿ ಇಲ್ಲ, ಓವೈಸಿ ಬಳಿ ಇದೆ. ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ನಂತರ, ತೆಲಂಗಾಣದಲ್ಲಿ ಸಕ್ಕರೆ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲಿದೆ. ಅಲ್ಲದೆ, ಇಲ್ಲಿ ಎಥೆನಾಲ್ ಪ್ಲಾಂಟ್ ಸ್ಥಾಪಿಸುವುದಾಗಿ ಭರವಸೆ ನೀಡಿದ್ದೇವೆ. ಇದು ತೆಲಂಗಾಣದ ರೈತರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.