ಬೆಂಗಳೂರು : ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯನ್ನು ಮತ್ತೆ ಬಂಧಿಸಲಾಗಿತ್ತು. ಇದೀಗ ಬಂಧನ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ದಾವಣಗೆರೆಯ ವಿರಕ್ತ ಮಠದಲ್ಲಿದ್ದ ಶಿವಮೂರ್ತಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಶಿವಮೂರ್ತಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ, ಬಂಧನ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
14 ದಿನಗಳ ನ್ಯಾಯಾಂಗ ಬಂಧನ
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಶಿವಮೂರ್ತಿಯನ್ನು ಬಂಧಿಸಲಾಗಿತ್ತು. ಇಂದು ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿ ಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಶಿವಮೂರ್ತಿಯನ್ನು ಬಂಧಿಸಿದ್ದರು. ನಂತರ ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಶಿವಮೂರ್ತಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಶಿವಮೂರ್ತಿ ಪ್ರಕರಣದ ಹಿನ್ನಲೆ?
ಮುರುಘಾ ಮಠದ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀಗಳು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮಾಹಿತಿ ನೀಡಿದ್ದರು. ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಮುರುಘಾ ಶ್ರೀಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. 2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿದ್ದರು.