ಬೆಂಗಳೂರು: ಮಹಾರಾಷ್ಟ್ರದ ನಾಸಿಕ, ಸೊಲ್ಲಾಪುರದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳದಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ.
ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಬೆಳೆಯೂ ಸರಿಯಾಗಿ ರೈತರ ಕೈ ಸೇರಿಲ್ಲ. ಇದೀಗ ದಿಢೀರ್ ಬೆಲೆ ಏರಿಕೆಯಿಂದ ಎಲ್ಲರೂ ಚಡಪಡಿಸುವಂತಾಗಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆಯಾದರೆ ಕ್ವಿಂಟಾಲ್‌ಗೆ 8000 ರಿಂದ 9000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರೆಗೆ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಸಗಟು ವ್ಯಾಪಾರಿಗಳು ಅಭಿಪ್ರಾಯಪಡುತ್ತಿದ್ದಾರೆ.
ಇದನ್ನೂ ಓದಿ: ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ!
ದಿನಬಳಕೆ ವಸ್ತುಗಳು ಬೆಲೆ ಏರಿಕೆಯಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದ್ದು , ಇದೀಗ ಈರುಳ್ಳಿ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಾಗಾಗಿ ಬಹುತೇಕ ಗೃಹಣಿಯರು ಅಡುಗೆಯಲ್ಲಿಈರುಳ್ಳಿಯ ಬದಲು ಎಲೆಕೋಸು ಬಳಕೆ ಹೆಚ್ಚು ಮಾಡಿದ್ದಾರೆ. ಉತ್ತಪ್ಪ, ದೋಸೆ, ಪಲಾವ್, ಮಸಾಲಬಾತ್, ರಾಯಿತಾದಲ್ಲಿಈರುಳ್ಳಿ ಬಳಕೆ ಅನಿವಾರ್ಯವಾಗಿದೆ. ಆದರೆ ಈಗ ಈರುಳ್ಳಿಯ ದರ ಏರಿಕೆಯಾಗಿರುವುದರಿಂದ ಅದರ ಬಳಕೆ ಕಡಿಮೆಗೊಳಿಸುವದಕ್ಕೆ ಸರ್ಕಸ್ ಮಾಡುವಂತಾಗಿದೆ.