Monday, December 23, 2024

ವಿಶ್ವಕಪ್​ ಟ್ರೋಫಿಗೆ ಅವಮಾನ: ಮಾರ್ಷ್​ ವಿರುದ್ದ ಕ್ರಿಕೆಟ್​ ಪ್ರೇಮಿಗಳು ಗರಂ!

ಅಹಮದಾಬಾದ್‌: ಭಾನುವಾರ ನಡೆದ ವಿಶ್ವಕಪ್​ 2023 ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ನಡುವೆ ಆಸ್ಟ್ರೇಲಿಯಾ ತಂಡದ ಆಟಗಾರ ವಿಶ್ವಕಪ್​ ಟ್ರೋಫಿಗೆ ಭಾರಿ ಅವಮಾನ ಮಾಡಿರುವ ಆರೋಪ ಎಲ್ಲೆಡೆ ಕೇಳಿ ಬಂದಿದೆ.

ಆಸ್ಟ್ರೇಲಿಯಾ 6ನೇ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್​ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮುಗುಘಾ ಮಠದ ಶಿವಮೂರ್ತಿ ಮತ್ತೆ ಅರೆಸ್ಟ್!

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ.

RELATED ARTICLES

Related Articles

TRENDING ARTICLES