Tuesday, December 3, 2024

ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು 2,000 ನೀಡುತ್ತಿದ್ದೇವೆ : ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು 2,000 ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಕುಟುಂಬ ನಿರ್ವಹಣೆಯ ಹೊಣೆಹೊತ್ತ ರಾಜ್ಯದ ಮಹಿಳೆಯರಿಗೆ ಬೆಲೆಯೇರಿಕೆಯಿಂದ ತುಸು ನೆಮ್ಮದಿ ನೀಡಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ತಿಂಗಳಿಗೆ 2,000 ರೂಪಾಯಿ ಸಹಾಯಧನ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ನೊಂದಾಯಿಸಿಕೊಂಡಿರುವ 99 ಲಕ್ಷದ 52 ಸಾವಿರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲಾಗಿದೆ. ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ  ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದು ಹೇಳಿದ್ದಾರೆ.

ಸಾಗಬೇಕಾದ ಹಾದಿ ಬಹುದೂರ ಇದೆ

ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES