ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ನ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಕೆಯಾದ 200 ಅಭ್ಯರ್ಥಿಗಳು ಅಯೋಧ್ಯೆಯಲ್ಲಿರುವ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಛೇರಿಯಾದ ಕರಸೇವಕ ಪುರಂನಲ್ಲಿ ಸಂದರ್ಶನವನ್ನು ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!