Sunday, December 22, 2024

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ : ಸರ್ಕಾರಕ್ಕೆ ಇವರ ಬೇಡಿಕೆಗಳೇನು..?

ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಲು ಚಲೋಗೆ ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಬೇಡಿಕೆಗಳು ಏನೇನು…? 

  1. ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು
  2. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು
  3. ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು
  4. ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.                                                                                                                                                                                   ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.

 

 

RELATED ARTICLES

Related Articles

TRENDING ARTICLES